Robbery: ಹುಡುಗಿ ಫ್ರೆಂಡ್ಸ್ ಮುಂದೆ ಶೋ ಮಾಡಲು ಟಿಪ್ ಟಾಪ್ ಆಗಿ ಹೋದ ಹುಡುಗನಿಗೆ ಕಾದಿತ್ತು ಶಾಕ್!

Robbery: ಯಾವ ರೀತಿ ಬೇಕಾದ್ರು ಜನ ಯಾಮಾರಿಸ್ತಾರೆ ಅನ್ನೋದಕ್ಕೆ ಇದೇ ಒಂದು ಉತ್ತಮ ಉದಾಹರಣೆ. ಹೌದು, ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ (Koramangala Police Station) ವ್ಯಾಪ್ತಿಯಲ್ಲಿ ಪ್ರಿಯತಮೆಯೇ ತನ್ನ ಸುಲಿಗೆ ಹಿಂದಿನ ಕಿಂಗ್‌ಪಿನ್‌ ಎಂದು ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.

 

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕಂತೆ, ನಿನ್ನ ಹತ್ರ ಇರುವ ಚಿನ್ನಾಭರಣ ಹಾಕ್ಕೊಂಡು, ಇನ್ನೋವಾ ಕಾರಿನಲ್ಲಿ ಟಿಪ್ ಟಾಪ್ ಆಗಿ ಬಾ ಅಂತಾ ಫೋನ್‌ ಮಾಡಿದ್ಲು. ಇತ್ತ ಮೋನಿಕಾ ಮಾತು ನಂಬಿದ ಪ್ರಿಯಕರ 60 ಗ್ರಾಂ ಚಿನ್ನಾಭರಣದ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾನೆ.

ಈ ವೇಳೆ ಮೋನಿಕಾ ಅಂಡ್ ಗ್ಯಾಂಗ್ ಶಿವನನ್ನ ಕಿಡ್ನ್ಯಾಪ್ ಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದ್ರೆ ಪ್ರಿಯತಮೆ ಶಿವನಿಗೆ 5 ಲಕ್ಷ ರೂ. ಕೊಡೋಕೆ ಒಪ್ಪಿಸಿದ್ದಳು. ಎಟಿಎಂ ಕಾರ್ಡ್ ಬೆಂಗಳೂರಿನ ಮೆಜೆಸ್ಟಿಕ್ ಅಡ್ರೆಸ್‌ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳೋಕೆ ಬಂದಿದ್ದರು. ಆದ್ರೆ ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಇದೇ ವೇಳೆ ರೌಂಡ್ಸ್‌ನಲ್ಲಿದ್ದ ಪಿಎಸ್‌ಐ ಮಾದೇಶ್‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಮತ್ತು ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಿಯತಮೆ ಮೋನಿಕಾಳೇ ಕಿಂಗ್ ಪಿನ್ ಅನ್ನೋದನ್ನು ಕೇಳಿ ಪ್ರಿಯಕರ ಶಿವ ಶಾಕ್ ಆಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್‌ನನ್ನ ಬಂಧಿಸಿದ್ದಾರೆ. ಬಂಧಿತ ಏಳು ಮಂದಿಯೂ ಆಂಧ್ರದ ನೆಲ್ಲೂರು ಮೂಲದವರು ಎಂದು ತಿಳಿದು ಬಂದಿದೆ.

ಈ ಪ್ರಕರಣದ ಕುರಿತು ಮಾತನಾಡಿದ ಸೌತ್ ಈಸ್ಟ್ ಡಿಸಿಪಿ ಸಾರಾ ಫಾತಿಮಾ, ಪ್ರಕರಣದಲ್ಲಿ ಯುವತಿ ಸೇರಿ 7 ಆರೋಪಿಗಳ ಬಂಧನವಾಗಿದೆ. ಇದರಲ್ಲಿ ಇಬ್ಬರ ಮೇಲೆ 5ಕ್ಕೂ ಹೆಚ್ಚು ಪ್ರಕರಣಗಳಿವೆ. ಇನ್ನು ಆರೋಪಿ ಯುವತಿಗೆ 3-4 ವರ್ಷದಿಂದ ಪರಿಚಯದಲ್ಲಿದ್ದ, ನೆಲ್ಲೂರಿನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ. ಕೋರಮಂಗಲ ಎಸ್‌ಐ ರಾತ್ರಿ ರೌಂಡ್ಸ್‌ನಲ್ಲಿದ್ದಾ ಗ ಎಟಿಎಂ ಬಳಿ ಆರೋಪಿಗಳ ನಡುವೆ ಗಲಾಟೆ ನಡೆದಿದೆ. 3 ಜನ ಕಿತ್ತಾಡಿಕೊಳ್ಳೋದು ಕಂಡು ಬಂದಾಗ ಅದನ್ನ ಗಮನಿಸಿದ್ದಾರೆ. ಅವರ ಮೇಲೆ ಸಂದೇಹ ಬಂದು ಸ್ಟೇಷನ್‌ಗೆ ಕರೆದುಕೊಂಡು ಬಂದಿದ್ದಾರೆ. ವಿಚಾರಣೆ ಮಾಡಿದಾಗ ಕಿಡ್ನಾಪ್ ಆಗಿರೋದು ಬೆಳಕಿಗೆ ಬಂದಿದೆ. ಹಣ ಡ್ರಾ ಮಾಡ್ತಾ ಇರೋದು ಸುಲಿಗೆ ಹಣ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.