Belthangady : ಗ್ರಾ. ಪಂ ಮೂರು ಸ್ಥಾನಗಳಿಗೆ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು!!

Share the Article

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady ) ತಾಲೂಕಿನ ವಿವಿಧ ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು ಇದರಲ್ಲಿ ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಹೌದು, ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.

ಅಂದಹಾಗೆ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ… ಅದೇ ರೀತಿ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.

Leave A Reply