Gaviyappa: ಪಂಚ ಗ್ಯಾರಂಟಿಗಳ ಪೈಕಿ ಎರಡನ್ನು ರದ್ದು ಮಾಡಲು ಸಿದ್ದರಾಮಯ್ಯಗೆ ಪತ್ರ ಬರೆಯುತ್ತೇವೆ – ಕಾಂಗ್ರೆಸ್ ಶಾಸಕ ಗವಿಯಪ್ಪ ಶಾಸಕ ಸ್ಟೇಟ್ಮೆಂಟ್

Share the Article

Gaviyappa: ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಎರಡು ಯೋಜನೆಗಳನ್ನು ರದ್ದು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುತ್ತೇವೆ ಎಂದು ಹೊಸಪೇಟೆ ಕಾಂಗ್ರೆಸ್ ಶಾಸಕ ಗವಿಯಪ್ಪ(Gaviyappa) ಅವರು ಹೇಳಿ ಸರ್ಕಾರಕ್ಕೆ ಮುಜುಗರ ತರುವಂತಹ ಕೆಲಸ ಮಾಡಿದ್ದಾರೆ.

ಹೌದು ಈ ಹಿಂದೆ ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕ ಗವಿಯಪ್ಪ ಹೇಳಿದ್ದರು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಅವರು ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಗವಿಯಪ್ಪ ಹೇಳಿದ್ದಾರೆ.

ಹೊಸಪೇಟೆಯ(Hospete )ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.

Leave A Reply