Belthangady : ಸಾಲ ಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ !!

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವ್ಯಕ್ತಿ ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೌದು, ಬೆಳ್ತಂಗಡಿ(Belthangady)ತಾಲೂಕಿನ ಕೆಂಗುಡೇಲು ನಿವಾಸಿ ಪೂವಣಿ ಗೌಡ (54) ಅವರು ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂವಣಿ ಗೌಡ ಅವರು ಸಾಲದ ಬಾಧೆಯಿಂದ ನೊಂದಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.
ಅಂದಹಾಗೆ ಎರಡು ವರ್ಷಗಳ ಹಿಂದೆಯಷ್ಟೇ ಹೊಸ ಮನೆ ಕಟ್ಟಿದ್ದರು. ಸಧ್ಯ ಅವರು ಮೃತರು ಪತ್ನಿ, ಪುತ್ರ, ಮತ್ತು ಪುತ್ರಿಯನ್ನು ಅಗಲಿದ್ದಾರೆ.