Udupi : ಕ್ಯಾನ್ಸರ್ ಭಯ – ಉಡುಪಿಯ ಇಬ್ಬರು ಆತ್ಮಹತ್ಯೆ!!

Udupi: ಕ್ಯಾನ್ಸರ್ ರೋಗಕ್ಕೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.

 

ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜಲಜ (85) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ರಾತ್ರಿ 10ರಿಂದ ಇಂದು ಬೆಳಗಿನ ಜಾವ 6ಗಂಟೆ ನಡುವಿನ ಅವಧಿಯಲ್ಲಿ ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಈ ವೇಳೆ ಪರೀಕ್ಷಿಸಿದ ವೈದ್ಯರು ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಯಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತರಾದ ಅವರು ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಸದ್ಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ರೀತಿಯ ಮತ್ತೊಂದು ಪ್ರಕರಣ ಬ್ರಹ್ಮಾವರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಚೇರ್ಕಾಡಿ ಗ್ರಾಮದ ಸುರೇಶ್ (56) ಎಂಬವರಿಗೆ ಅನ್ನನಾಳದಲ್ಲಿ ಗುಳ್ಳೆಹಾಗೂ ದುರ್ಮಾಂಸ ಮತ್ತು ಕೆನ್ನೆಯಲ್ಲಿ ಗಡ್ಡೆಯಾಗಿದ್ದು ವೈದ್ಯರು ಇದು ಕ್ಯಾನ್ಸರ್ ಗೆ ತುತ್ತಾಗಿದೆ ಎಂದು ಹೇಳಿದ್ದಾರೆ. ಇದರಿಂದ ಮನನೊಂದು ಮಂಗಳವಾರ 10ರಿಂದ 12 ಗಂಟೆ ನಡುವಿನ ಅವಧಿಯಲ್ಲಿ ಮನೆಯ ಮಾಡಿಗೆ ನೈಲಾನ್ ರೋಪ್ ಬಿಗಿದು ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave A Reply

Your email address will not be published.