Dakshina kannada: ಗ್ರಾ. ಪಂ ಉಪಚುನಾವಣೆ – 24ರ ಪೈಕಿ 19 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಭರ್ಜರಿ ಗೆಲುವು!!

Dakshina Kannada: ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ 24 ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ 19 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

 

ಈ ಕುರಿತು ಮಂಗಳವಾರ ವಿವಿಧ ಪಂಚಾಯತ್‌ ಉಪಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌.ಪೂಜಾರಿ(Padmaraj Poojari ) ಅವರು ‘ವಿಪಕ್ಷಗಳ ವಕ್ಫ್, ರೇಷನ್‌ ಕಾರ್ಡ್‌ ಗೊಂದಲ ಕುರಿತ ಅಪಪ್ರಚಾರಗಳಿಗೆ ಪ್ರಬುದ್ಧ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಪುನಶ್ಚೇತನ ಮತ್ತು ಮುಂಬರುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಇದು ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗೂ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ಜನತೆ ಒಪ್ಪಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌.ಪೂಜಾರಿ ತಿಳಿಸಿದ್ದಾರೆ.

Leave A Reply

Your email address will not be published.