Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ !!

Share the Article

Sagara: ಯುವಕನೋರ್ವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ(Sagara) ತಾಲೂಕಿನ ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಕೊಪ್ಪದಲ್ಲಿ ಹಾನಂಬಿ ಹೊಳೆಯ ಮೇಲ್ಭಾಗದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾದ ಘಟನೆ ನ.27ರ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.

ಮೃತ ಯುವಕನನ್ನು ಸಾಗರ ಪೇಟೆಯ ಜನ್ನತ್ ನಗರದ ನಿವಾಸಿ ಪ್ರಕಾಶ್ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಯುವಕ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಕಾರಣ ಆತ್ಮಹತ್ಯೆ ಇರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದ್ದು, ನಿಖರ ಕಾರಣ ಖಚಿತಪಟ್ಟಿಲ್ಲ.

Leave A Reply