Bengaluru: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

Share the Article

Bengaluru: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ರಾಜಾಜಿನಗರದಲ್ಲಿ ನಡೆದಿದೆ.

ಪ್ರಿಯಾಂಕಾ (19) ಎಂಬ ವಿದ್ಯಾರ್ಥಿನಿ ನಗರದಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಮನೆಯ ಟೆರೇಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply