Bajpe: ಹೆಜ್ಜೇನು ಕಡಿತ – ದಿನಪತ್ರಿಕೆ ವಿತರಕ ಸಾವು!!

Share the Article

Bajpe: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಗುರುವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಪುಷ್ಪಾರಾಜ ಅವರು ಬಜಪೆ(Bajpe) ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊರ್ಕೋಡಿ ಪರಿಸರದಲ್ಲಿ ಕಾಲ್ನಡಿಗೆಯಲ್ಲಿ ಹೋಗಿ ಮನೆಮನೆಗೆ ದಿನಪ್ರತಿಕೆಯನ್ನು ವಿತರಿಸುತ್ತಿದ್ದ ಅವರು ಪರಿಸರದಲ್ಲಿ ಬೊಗ್ಗು ಎಂದೇ ಚಿರಪರಿತರಾಗಿದ್ದರು. ತಮ್ಮ ಗಳಿಕೆಯಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸುವ ಮೂಲಕ ಮಕ್ಕಳ ಪ್ರೀತಿಯನ್ನೂ ಗಳಿಸಿದ್ದರು. ತಮ್ಮ ಅಲ್ಪ ಆದಾಯವನ್ನು ಸಮಾಜ ಸೇವೆಗೂ ವ್ಯಯಿಸುತ್ತಿದ್ದರು.

ಅವರು ಪೇಜಾವರ ಪಡ್ಡೋಡಿಯ ದಿ. ಶಂಭು ಶೆಟ್ಟಿ ಹಾಗೂ ದಿ. ವಸಂತಿ ದಂಪತಿಯ ಪುತ್ರ. ಅವಿವಾಹಿತರಾಗಿದ್ದು, ಮೂವರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.

Leave A Reply