Bengaluru : ಕೆಪಿಸಿಸಿ ಕಾರ್ಯದರ್ಶಿಯಿಂದ ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು !!

Bengaluru : ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆ ಅಧ್ಯಕ್ಷರಾಗಿರುವ ಕಾಂಗ್ರೆಸ್‌ ಮುಖಂಡರೊಬ್ಬರ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

 

ಹೌದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ (KPCC secretary) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕೆಪಿಸಿಸಿ ಕಾರ್ಯದರ್ಶಿ ಗುರುಪ್ಪ ನಾಯ್ಡು (Gurappa Naidu) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಬೆಂಗಳೂರಿನ (Bengaluru) ತ್ಯಾಗರಾಜ ನಗರದ (Tyagarajanagar) ಖಾಸಗಿ ಶಾಲೆಯೊಂದರಲ್ಲಿ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಆರೋಪಿಸಲಾಗಿದೆ. ಶಾಲೆಯ ಕೆಲ ಶಿಕ್ಷಕಿಯರು (Lady Teacher) ಹಾಗೂ ಕೆಲ ಮಹಿಳಾ ಸಿಬ್ಬಂದಿಗೆ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?:
ಸಂತ್ರಸ್ತೆ ನೀಡಿದ ದೂರಿನ ಅನ್ವಯ, ನಾನು 3 ವರ್ಷಗಳ ಕಾಲ ತ್ಯಾಗರಾಜನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದೇನೆ. ಈ ಶಾಲೆಗೆ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಅಧ್ಯಕ್ಷರಾಗಿದ್ದಾರೆ. ಈ ಶಾಲೆಯಲ್ಲಿ ಸುಮಾರು 75ಕ್ಕೂ ಅಧಿಕ ಮಹಿಳಾ ಶಿಕ್ಷಕಿಯರು ಕೆಲಸ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಕೆಲಸ ಮಾಡುವ ಶಿಕ್ಷಕಿಯರು ಹಾಗೂ ಸಿಬ್ಬಂದಿ ಪೈಕಿ ಬಹುತೇಕರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದವರು. ಕೆಲ ಸಿಬ್ಬಂದಿ ತಮ್ಮ ಮಕ್ಕಳನ್ನು ಈ ಶಾಲೆಯಲ್ಲಿ ಓದಿಸುತ್ತಿದ್ದಾರೆ.

ವಿಡಿಯೋ ತೋರಿಸಿ ಬ್ಲ್ಯಾಕ್‌ ಮೇಲ್‌:
ಈ ಶಾಲೆಯ ಅಧ್ಯಕ್ಷನಾಗಿರುವ ಗುರಪ್ಪ ನಾಯ್ಡು ಹೆಂಗಸರನ್ನು ಬೆನ್ನಟ್ಟುವ ವಿಕೃತ ಕಾಮಿ. ಶಾಲೆಯಲ್ಲಿ ಯಾವ ಹೆಣ್ಣು ಮಕ್ಕಳನ್ನು ಬೀಡುವುದಿಲ್ಲ. ಇವರನ್ನು ಕಂಡರೆ ಶಾಲೆಯಲ್ಲಿ ಎಲ್ಲರೂ ಹೆದರುತ್ತಾರೆ. ತಮ್ಮ ಜತೆ ಇರುವ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋ ಮಾಡಿಕೊಂಡು ಆ ಹೆಣ್ಣುಮಕ್ಕಳನ್ನು ಬೆದರಿಸುತ್ತಾರೆ. ನಾನು ಹೇಳಿದಂತೆ ಕೇಳಿದಿದ್ದರೆ ಈ ವಿಡಿಯೋಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಹೆದರಿಸುತ್ತಾರೆ. ತನ್ನ ವಿರುದ್ಧ ದೂರು ಕೊಟ್ಟರೆ ಸುಮ್ಮನೆ ಬಿಡುವುದಿಲ್ಲ ಜೀವ ಬೆದರಿಕೆ ಹಾಕುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Leave A Reply

Your email address will not be published.