Mangaluru: ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ: 10 ಮಂದಿ ಮೇಲೆ FIR !
Mangaluru: ಮಂಗಳೂರು (Mangaluru) ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಪ್ರಕಾರ, ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಮನೋಶಾಸ್ತ್ರ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿ ರ‍್ಯಾಗಿಂಗ್ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿಯಾಗಿದ್ದು ನವೆಂಬರ್ 25 ರಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿದಾಯಿಸ್ ಎಂಬಾತ ಲೊಕೇಶನ್ ಕಳುಹಿಸಿ, ಅಲ್ಲಿಗೆ ಬರುವಂತೆ ಕಿರಿಯ ವಿದ್ಯಾರ್ಥಿಗೆ ತಿಳಿಸಿದ್ದಾನೆ. ಆತ ತನ್ನ ಇತರ ಸ್ನೇಹಿತರನ್ನು ಕರೆದುಕೊಂಡು ನಿಗದಿತ ಸ್ಥಳಕ್ಕೆ ತೆರಳಿದ್ದಾನೆ. ಹಿರಿಯ ವಿದ್ಯಾರ್ಥಿಯ ಕೊಠಡಿಯೊಳಗೆ ಹೋದ ಬಳಿಕ, ಅಲ್ಲಿಯೇ ಇದ್ದ ಸಿದಾಯಿಸ್, ಅಮಲ್ ಕೃಷ್ಣ ಹಾಗೂ ಸಾಜೀದ್ ಅವರುಗಳು ಅವಾಚ್ಯ ಶಬ್ದಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ರೇಗಿಸಿದ್ದು, ಅಲ್ಲದೇ ಕೊಠಡಿ ಬಾಗಿಲನ್ನು ಮುಚ್ಚಿ ಕಿರಿಯ ವಿದ್ಯಾರ್ಥಿಗೆ ಹಾಡಲು ಮತ್ತು ನೃತ್ಯ ಮಾಡಲು ಹೇಳಿದ್ದಾರೆ. ಇದಕ್ಕೆ ಕಿರಿಯ ವಿದ್ಯಾರ್ಥಿ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಹಿರಿಯ ವಿದ್ಯಾರ್ಥಿಗಳಾದ ಸಿದಾಯಿಸ್, ಅಮಲ್ ಕೃಷ್ಣ ಹಾಗೂ ಸಾಜಿದ್ ಆತನ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ. ನಂತರ ಸಹ ವಿದ್ಯಾರ್ಥಿಗಳು ಕೊಠಡಿಗೆ ಬಂದು ಇಲ್ಲಿ ನಡೆದ ವಿಷಯವನ್ನು ಕಾಲೇಜು ಮಂಡಳಿ ಹಾಗೂ ಪೊಲೀಸರಿಗೆ ತಿಳಿಸಿದಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ.
ಆದರೆ ಮನೆಗೆ ಬಂದ ಕಿರಿಯ ವಿದ್ಯಾರ್ಥಿ ಭಯದಿಂದ ಯಾರ ಬಳಿಯೂ ಈ ವಿಷಯವನ್ನು ಹಂಚಿಕೊಂಡಿರಲಿಲ್ಲ. ಮರುದಿನ ಬೆಳಿಗ್ಗೆ ಎಚ್ಚರವಾದಾಗ ಆತನ ಎಡಕಿವಿಯಲ್ಲಿ ರಕ್ತ ಬಂದಿರುವುದನ್ನು ಕಂಡು ಕಾಲೇಜಿನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಬಳಿಕ ವಿದ್ಯಾರ್ಥಿ ಕಾಲೇಜಿನ ಡೀನ್ ಹಾಗೂ ಆಯಂಟಿ ರ‍್ಯಾಗಿಂಗ್ ಕಮಿಟಿಗೆ ದೂರು ನೀಡಿದ್ದಾನೆ. ಇದೀಗ ಕಿರಿಯ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
At BWER Company, we prioritize quality and precision, delivering high-performance weighbridge systems to meet the diverse needs of Iraq’s industries.
Choose BWER for trusted weighbridge systems in Iraq, offering customized solutions to optimize your industrial operations and ensure precise weight measurement every time.
BWER Company is committed to advancing Iraq’s industrial sector with premium weighbridge systems, tailored designs, and cutting-edge technology to meet the most demanding applications.
BWER leads the way in weighbridge technology in Iraq, delivering customized weighing solutions that are accurate, efficient, and ideal for heavy-duty use in any environment.
BWER leads the way in weighbridge technology in Iraq, delivering customized weighing solutions that are accurate, efficient, and ideal for heavy-duty use in any environment.
BWER Company stands as a trusted name in Iraq’s weighbridge industry, offering innovative designs, reliable installations, and comprehensive support for all weighing requirements.