Karkala: ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ಇನ್ನಿಲ್ಲ!!

Karkala : ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ನಿಧನರಾಗಿದ್ದಾರೆ.

 

ಹೌದು, ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ(Karkala) ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

56 ವರ್ಷದ ಜೂನಿಯಾನ ಟೀಚರ್ ಕಳೆದ 2 ವರ್ಷಗಳಿಂದ ಕಾರ್ಕಳದ ಬೈಲೂರು ಮೇನ್ ಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಉಡುಪಿ ಜಿಲ್ಲೆಯ ಉದ್ಯಾವರ ನಿವಾಸಿಯಾದ ಜ್ಯೂಲಿಯಾನ ಟೀಚರ್ ಕಾರ್ಕಳ ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದು ಎಲ್ಲರ ಪ್ರೀತಿ ಪಾತ್ರರಾಗಿದ್ದರು. ಪುತ್ರ ವಿದೇಶದಲ್ಲಿರುವುದರಿಂದ ಅವರ ಬರುವಿಕೆಗಾಗಿ ಕಾಯಲಾಗುತ್ತಿದ್ದಾರೆ.

ಮೃತರು, ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರಾಗಿರುವ ಪತಿ ಲಾರೆನ್ಸ್ ಡೆಸಾ, ಪುತ್ರ, ಪುತ್ರಿ, ವಿದ್ಯಾರ್ಥಿ ಸಮುದಾಯ ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶನಿವಾರ ಉದ್ಯಾವರ ಚರ್ಚಿನಲ್ಲಿ ನಡೆಯಲಿದೆ.

Leave A Reply

Your email address will not be published.