Telangana : ಹೃದಯಘಾತಕ್ಕೆ 4ನೇ ತರಗತಿ ವಿದ್ಯಾರ್ಥಿನಿ ಬಲಿ!!

Telangana : ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತೆಲಂಗಾಣದ(Telangana) ಮಂಚಿರ‍್ಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ ನಡೆದಿದೆ.

 

ಮೃತ ಬಾಲಕಿಯನ್ನು ಸಮನ್ವಿತಾ (10) ಎಂದು ಗುರುತಿಸಲಾಗಿದೆ. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿ ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ತಕ್ಷಣ ಆಕೆಯ ತಂದೆ ನಾಗರಾಜು ಅವರು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ.

Leave A Reply

Your email address will not be published.