Udupi: ನಕ್ಸಲ್ ವಿಕ್ರಂ ಗೌಡ ಎಂಕೌಂಟರ್ ವಿಚಾರ – ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?

Udupi : ತಾಲ್ಲೂಕಿನ ಪೀತುಬೈಲ್‌ನಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟ‌ರ್‌ ವಿಚಾರವಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ಯಸ್, ಉಡುಪಿಯಲ್ಲಿ (Udupi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಕ್ಸಲೈಟ್‌ಗಳನ್ನು ಕಟ್ಟಿ ಹಾಕಬೇಕು. ಇದು ಸರ್ಕಾರದ ನಿರ್ಧಾರ ಎಂದು ತಿಳಿಸಿದರು.

ಅಲ್ಲದೆ ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡನ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ಆತ ಒಂದು ಬಾರಿ ಫೈರಿಂಗ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವ ಹಾನಿ ಆಗುತ್ತಿತ್ತು. ನಕ್ಸಲರನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂಬುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭಗಳಲ್ಲೂ ಇರುತ್ತವೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ’ ಎಂದರು.

Leave A Reply

Your email address will not be published.