HSRP Number plate: 5ನೇಬಾರಿ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರರಿಸಿದ ಸರ್ಕಾರ!

HSRP Number plate: ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ (HSRP Number plate ) ಫಲಕಗಳನ್ನು ಅಳವಡಿಸಲು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,HSRP ನಂಬರ್ ಪ್ಪ್ಲೇಟ್ ಗಳನ್ನು ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಲು ಈ ಹಿಂದೆ ಆಗಸ್ಟ್ 17ರವರೆಗೆ ಅವಕಾಶ ನೀಡಲಾಗಿತ್ತು.ಆ ನಂತರ ಈ ಅವಧಿಯನ್ನು ದಿನಾಂಕ ನವೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು. ಆ ನಂತರ ಮತ್ತೆ ಇತ್ತೀಚೆಗಷ್ಟೇ ಹೈಕೋರ್ಟ್ ಡಿಸೆಂಬರ್ 3ರ ವರಗೆ ಗಡುವು ನೀಡಿತ್ತು. ಇದೀಗ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ನೋಂದಣಿಯ ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ 5ನೇ ಬಾರಿಗೆ ಗಡುವು ವಿಸ್ತರಿಸಲಾಗಿದೆ.

Leave A Reply

Your email address will not be published.