Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ. ನಾಳೆಯೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಹಾಗಿದ್ರೆ ಯಾವ ಜಿಲ್ಲೆಯಲ್ಲಿ ಎಲ್ಲ ಮಳೆಯಾಗಲಿದೆ? ಇಲ್ಲಿದೆ ನೋಡಿ ಡೀಟೇಲ್ಸ್
ಡಿಸೆಂಬರ್ 2ರಂದು ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಬೀಳಲಿದೆ. ಅದರಲ್ಲೂ ಕೊಡಗು ಮತ್ತು ಮೈಸೂರಿನಲ್ಲಿ ಗುಡುಗು-ಮಳೆ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಹಾಗೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಗಳೂರು ನಗರ, ತುಮಕೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನುಳಿದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.. ಇನ್ನು ಡಿಸೆಂಬರ್ 3ರಂದು ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಡಿ.3ರಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.