Mangaluru : 5ನೇ ಮದುವೆಗೆ ತಯಾರಿ – 4ನೇ ಹೆಂಡತಿಯನ್ನು ಹೊಡೆದು ಮನೆಯಿಂದ ಹೊರ ಹಾಕಿದ ಪಾಪಿ ಪತಿ, ದೂರು ದಾಖಲು

Mangaluru: ವ್ಯಕ್ತಿಯೋರ್ವ ನಾಲ್ಕನೇ ಹೆಂಡತಿ ಮೇಲೆ ಹಲ್ಲೆ ಮಾಡಿ ಐದನೇ ಮದುವೆಗೆ ಸಿದ್ಧತೆ ನಡೆಸಿಕೊಂಡಿರುವಂತಹ ಅಘಾತಕಾರಿ ಪ್ರಕರಣ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಪಾಣೆಮಂಗಳೂರಿನ ಗೂಡಿನಬಳಿಯಲ್ಲಿ ವ್ಯಕ್ತಿಯೋರ್ವ ಐದನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನ್ನ ನಾಲ್ಕನೇ ಪತ್ನಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನೆಯಿಂದ ಹೊರ ಹಾಕಿದ ಘಟನೆ ನ. 27ರಂದು ನಡೆದಿದೆ.

ಗೂಡಿನಬಳಿ ನಿವಾಸಿ ಮಹಮ್ಮದ್ ರಫೀಕ್ ಪ್ರಕರಣದ ಆರೋಪಿಯಾಗಿದ್ದು, ಆತನ ವಿರುದ್ಧ ನಾಲ್ಕನೇ ಪತ್ನಿ ದೂರು ನೀಡಿದ್ದಾರೆ. ಹೀಗಾಗಿ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಗು ಹಾಗೂ ತನಗೆ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ. ಆತ ತನ್ನ ಎಲ್ಲ ಚಿನ್ನಾಭರಣಗಳನ್ನು ದೋಚಿದ್ದಾನೆ. ಆತನಿಗೆ ಈಗಾಗಲೇ ತನ್ನನ್ನು ಸೇರಿ ನಾಲ್ಕು ಮದುವೆಯಾಗಿದ್ದು, ೫ನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Leave A Reply

Your email address will not be published.