Death: ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮರಣ!
Death: ಮನೆಯಲ್ಲಿ ಆಟವಾಡುತ್ತಾ ಬಲೂನ್ (Balloon) ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ (Haliyala) ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನವೀನ ನಾರಾಯಣ ಬೆಳಗಾಂವಕರ್ (13) ಎಂಬ ಬಾಲಕ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ.
ಈತ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಆದರೆ ಅಷ್ಟರಲ್ಲೇ ಉಸಿರಾಟವಾಡಲು ಸಾಧ್ಯವಾಗದೇ ಬಾಲಕ ಸತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.