Dakshina Kannada: ಭಾರೀ ಮಳೆಯ ಹಿನ್ನೆಲೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ
Dakshina Kannada: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತ ಉಂಟಾಗಿರುವ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ದಿನಾಂಕ: 02-12-2024 ರಿಂದ 03-12-2024 ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗೃತ ಕ್ರಮವಾಗಿ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ.
1. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
2. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
3. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.