Crime: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ!

Share the Article

Crime: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ (Crime) ವ್ಯಕ್ತಿಯನ್ನು ಬಂಧಿಸಲಾಗಿದೆ.

ಈಗಾಗಲೇ ಆರೋಪಿ ಬಳಿ ಇದ್ದ ಆರು ಜೀವಂತ ಆಮೆಗಳು ಹಾಗೂ 72 ಕೆಜಿ ತೂಕದ ಶ್ರೀಗಂಧ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು,
ಬಂಧಿತ ವ್ಯಕ್ತಿಯನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಆರ್‌. ಕುಮಾರ್ ಎಂದು ಗುರುತಿಸಲಾಗಿದೆ.

ಇದೀಗ ಈತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave A Reply