Basavanagouda Yatnal: ಬಿಜೆಪಿ ಹೈಕಮಾಂಡ್ ನಿಂದ ಶೋಕಾಸ್ ನೋಟೀಸ್ – ಖಡಕ್ ರಿಪ್ಲೇ ಕೊಟ್ಟ ಯತ್ನಾಳ್ !!

Basavanagouda Yatnal: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ. ಈ ಬೆನ್ನಲ್ಲೇ ಯತ್ನಾಳ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಬಿಜೆಪಿ ಹೈಕಮಾಂಡ್‌ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ(BJP) ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಹೀಗೆ ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಅದಕ್ಕೀಗ ಯತ್ನಾಳ್ ಅವರು ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಶೋಕಾಸ್ ನೋಟಿಸ್ ಸಮೇತ ಪೋಸ್ಟ್ ಮಾಡಿರುವ ಅವರು, ಶೀಘ್ರದಲ್ಲೇ ನೋಟಿಸ್‌ಗೆ ಉತ್ತರ ಕೊಡುವೆ ಎಂದಿದ್ದಾರೆ. ”ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ ಎಂದು ಬಹಿರಂಗವಾಗಿ ಗುಡುಗಿದ್ದಾರೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ಇದ್ಯಾವುದಕ್ಕೆ ಜಗ್ಗುವುದಿಲ್ಲ. ನನ್ನ ಹೋರಾಟ ಜನಪರ ಎಂಬ ಸಂದೇಶ ರವಾನಿಸಿದ್ದಾರೆ.

Leave A Reply

Your email address will not be published.