Hassan: ಅಪಘಾತದಲ್ಲಿ ಯುವ IPS ಅಧಿಕಾರಿ ಹರ್ಷವರ್ಧನ್‌ ದುರ್ಮರಣ – ವೃತ್ತಿ ಜೀವನದ ಮೊದಲ ದಿನವೇ ದುರಂತ, ಬದುಕು ಅಂತ್ಯ !!

Hassan: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.

 

ಮೈಸೂರಿನ ಕೆಪಿಎನಿಂದ ಹಾಸನ(Hassan) ಜಿಲ್ಲಾ ಎಸ್‌ಪಿ ಕಚೇರಿಗೆ ಸೇವೆಗೆ ವರದಿ ಮಾಡಿಕೊಳ್ಳಲು ಬರುತ್ತಿದ್ದ ಮಧ್ಯಪ್ರದೇಶ ಮೂಲದ ಹರ್ಷವರ್ಧನ್‌ ಎಂಬ ಯುವ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಪೊಲೀಸ್ ವಾಹನದ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಅಪಘಾತವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದ ಹರ್ಷವರ್ಧನ್‌ ಭಾನುವಾರ ಸಂಜೆ ಸೇವೆಗೆ ವರದಿ ಮಾಡಿಕೊಳ್ಳಲು ಮೈಸೂರು ಹೊಳೆ ನರಸೀಪುರ ಕಡೆಯಿಂದ KA-13-G-1386 ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ಕಿತ್ತಾನೆ ಗಡಿ ಬಳಿ ಹರ್ಷಬರ್ಧನ್‌ ಪ್ರಯಾಣಿಸುತ್ತಿದ್ದ ಜೀಪ್‌ನ ಟಯರ್ ಸಿಡಿದು ವಾಹನ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದೆ. ಇದರಿಂದ ಐಪಿಎಸ್ ಅಧಿಕಾರಿ ಅವರ ತಲೆಗೆ ಪೆಟ್ಟುಬಿದ್ದು ತೀವ್ರ ರಕ್ತಸ್ರಾವ ಆಗಿದೆ. ಇದರಿಂದ ಐಪಿಎಸ್ ಅಧಿಕಾರಿ ಅವರ ತಲೆಗೆ ಪೆಟ್ಟುಬಿದ್ದು ತೀವ್ರ ರಕ್ತಸ್ರಾವ ಆಗಿದೆ. ಚಾಲಕ ಮಂಜೇಗೌಡ ಎಂಬುವರಿಗೂ ಗಾಯಗಳಾಗಿವೆ. ಅಪಘಾತವನ್ನು ಗಮನಿಸಿದ ಸ್ಥಳೀಯರು ಕೂಡಲೇ ರಕ್ತಸ್ರಾವವಾಗಿ ಬಿದ್ದಿದ್ದ ಅಧಿಕಾರಿ ಮತ್ತು ಚಾಲಕನನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಂದಹಾಗೆ ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷಬರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷಬರ್ಧನ್‌ಗೆ ಶುಭಕೋರಿ ಕಳುಹಿಸಲಾಗಿತ್ತು. ಆದರೆ ವಿಧಿ ಆಟ ಬೇರೆ ಆಗಿತ್ತು.

Leave A Reply

Your email address will not be published.