Putturu : ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿ ಇರಿಸಿದ ಪ್ರಕರಣ – ಮೂವರು ಆರೋಪಿಗಳಿಗೆ ಜಾಮೀನು ಮಂಜೂರು!!

Putturu : ಪುತ್ತೂರಿನ ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಈ ಮೂವರು ಆರೋಪಿಗಳಿಗೆ ಜಾಮೀನು ದೊರೆತಿದೆ.

 

ಪುತ್ತೂರಿನ(Putturu)ಸಾಲ್ಮರ(Salmara) ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಅಮಾನವೀಯ ರೀತಿಯಲ್ಲಿ ರಸ್ತೆ ಬದಿಯಲ್ಲೇ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವ್ರೋ, ಸ್ಟ್ಯಾನಿ ಡಯಾಸ್‌, ಪ್ರಕಾಶ್‌ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಈ ಮೂವರು ಆರೋಪಿಗಳಿಗೆ ಇದೀಗ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Leave A Reply

Your email address will not be published.