Basavanagouda Patil Yatnal : ಹಿಂದುತ್ವದ ಫೈಯರ್ ಬ್ರಾಂಡ್, ಬಸವನಗೌಡ ಯತ್ನಾಳ್ ಕಾಂಗ್ರೆಸ್ ಸೇರ್ಪಡೆ?

Share the Article

Basavanagouda Yatnal: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ. ಈ ಬೆನ್ನಲ್ಲೇ ಯತ್ನಾಳ್ ಅವರು ಖಡಕ್ ಪ್ರತಿಕ್ರಿಯೆ ಕೂಡ ನೀಡಿದ್ದರು. ಆದರೆ ಈ ಬೆನ್ನಲ್ಲೇ ಯತ್ನಾಳ್ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರ ಭಾರಿ ಸದ್ದು ಮಾಡುತ್ತಿದೆ.

ಹೌದು, ವಿಜಯೇಂದ್ರ ವಿರುದ್ಧ ಮುನಿಸಿಗೆ ಯತ್ನಾಳ್ ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆ ಹಲವರಿಗಿದೆ. ಈ ಬಗ್ಗೆ ಇಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಪ್ರತಿಕ್ರಿಯಿಸಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಗೆ ಕಾಂಗ್ರೆಸ್ ಪಕ್ಷದ ತತ್ವಗಳು ಹೊಂದಾಣಿಕೆಯಿಲ್ಲ. ಎಐಸಿಸಿ ಅಧ್ಯಕ್ಷರು, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರನ್ನೂ ನಿಂದಿಸುವ ಅವರು ಕಾಂಗ್ರೆಸ್ ಸೇರುವುದು ಸಾಧ್ಯವೇ? ಕಾಂಗ್ರೆಸ್ ಸಿದ್ಧಾಂತಗಳು ಅವರಿಗೆ ಆಗಿ ಬರೋಲ್ಲ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಅಂದಹಾಗೆ ಬಸನಗೌಡ ಪಾಟೀಲ್ ಪಕ್ಕಾ ಹಿಂದುತ್ವ ಪ್ರತಿಪಾದಿಸುವ ನಾಯಕ. ಅವರಿಗೆ ಸಮಾಜವಾದೀ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಸರಿಬರಲ್ಲ. ಹೀಗಾಗಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಕಡಿಮೆಯೇ ಎನ್ನಬಹುದು.

Leave A Reply