BPL Card: ಸರ್ಕಾರಿ ನೌಕರರೇ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ? ಹಾಗಿದ್ರೆ ನಿಮಗೆ ಈ ಶಿಕ್ಷೆ ಗ್ಯಾರಂಟಿ
BPL Card: ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ. ಅಂತೆಯೇ ಈ ನಡುವೆ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರೀ ನೌಕರರಿಗೆ ಬಿಗ್ ಶಾಕ್ ಸಿಕ್ಕಿದೆ.
ಹೌದು, ಸರ್ಕಾರದ ಮಾನದಂಡದ ಪ್ರಕಾರ ಸರ್ಕಾರೀ ನೌಕರರು, ತೆರಿಗೆ ಪಾವತಿ ಮಾಡುವವರಿಗೆ ಬಿಪಿಎಲ್ ಕಾರ್ಡ್ ರದ್ದಾಗಿದೆ. ಜೊತೆಗೆ ಬಿಪಿಎಲ್ ಕಾರ್ಡ್ ಹೊಂದಿದ್ದ ನೌಕರರ ರೇಷನ್ ಕಾರ್ಡ್ ನ್ನು ಎಪಿಎಲ್ ಗೆ ವರ್ಗಾಯಿಸಿರುವುದಲ್ಲದೆ ದಂಡದ ಬರೆ ನೀಡಿದೆ.
ಇನ್ನು ಇದುವರೆಗೆ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 4,12, 890 ರೂ. ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 72 ಸರ್ಕಾರಿ ನೌಕರರಿಗೆ ದಂಡ ವಿಧಿಸಲಾಗಿದೆ. ಒಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಅರ್ಹತೆ ಇರುವ ಬಡವರಿಗೆ ಮಾತ್ರ ಲಭಿಸುವಂತಾಗಬೇಕು. ಬಿಪಿಎಲ್ ಕಾರ್ಡ್ ಮೂಲಕ ಅನರ್ಹರೂ ಉಚಿತ ಯೋಜನೆಗಳ ಲಾಭ ಪಡೆಯುತ್ತಿದ್ದರೆ ಅದು ಸರ್ಕಾರಕ್ಕೆ ನಷ್ಟ ಉಂಟು ಮಾಡಲಿದೆ.