Dakshina Kannada: ಹೃದಯಾಘಾತದಿಂದ ಶಾಲಾ ಮುಖ್ಯ ಶಿಕ್ಷಕ ನಿಧನ!!

Dakshina Kannada: ಫೋನ್‌ನಲ್ಲಿ ಮಾತನಾಡುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಆಲಂಕಾರು ಗ್ರಾಮದ ಬಾಕಿಲ ಎಂಬಲ್ಲಿ ನಡೆದಿದೆ.

ಹೌದು, ಶಾಲಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮನೆ ಅಂಗಳದಲ್ಲಿ ಫೋನ್‌ನಲ್ಲಿ ಮಾತನಾಡುತ್ತಿದ್ದ ಗೋಳಿತೊಟ್ಟು ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‌ ಬಾಕಿಲ(Pradeep Bakila) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 42 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 4ರಂದು ಶಾಂತಿನಗರ ಎಂಬಲ್ಲಿ ಶಾಲೆಯ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್‌ ಬಂದು ಅಂಗಳದಲ್ಲಿ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಪೋನಿನಲ್ಲಿ ಮಾತನಾಡುವಾಗ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ಇಂದು ಬೆಳಗ್ಗೆ ಮನೆ ಮುಂದೆ ಅವರ ಮೃತದೇಹ ಪತ್ತೆಯಾಗಿದೆ.

ಇನ್ನು ಜೆಸಿಐನ ಪೂರ್ವ ಉಪಾಧ್ಯಕ್ಷರಾಗಿ, ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದ ಪ್ರದೀಪ್‌ ಬಾಕಿಲ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸತತ 25 ಗಂಟೆಗಳ ತರಬೇತಿ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗೆ ಭಾಜನರಾಗಿದ್ದರು. ಪ್ರದೀಪ್‌ ಅವರ ನಿಧನಕ್ಕೆ ಗ್ರಾಮಸ್ಥರು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.