Ration: ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್ – ಕೇಂದ್ರದಿಂದ ‘ಅನ್ನ ಚಕ್ರ’ ಯೋಜನೆ ಜಾರಿ!!

Ration: ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ಕೇಂದ್ರ ಸರ್ಕಾರ ರಾಜ್ಯಗಳಾದ್ಯಂತ ಪಿಡಿಎಸ್ ಅಡಿಯಲ್ಲಿ ಆಹಾರ ಧಾನ್ಯಗಳ ಪೂರೈಕೆ ಸರಪಳಿಯನ್ನು ಉತ್ತಮಗೊಳಿಸುವ ಸಾಧನವಾದ ‘ಅನ್ನ ಚಕ್ರ’ವನ್ನು ಆಹಾರ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ.

ಸಾರ್ವಜನಿಕ ವಿತರಣೆ ವ್ಯವಸ್ಥೆ ಸರಬರಾಜನ್ನು ಗರಿಷ್ಠಗೊಳಿಸಲು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ್ದಾರೆ. ಮುಖ್ಯವಾಗಿ ವಿಶ್ವ ಆಹಾರ ಕಾರ್ಯಕ್ರಮ ಮತ್ತು ಐಐಟಿ ದೆಹಲಿ ಪಾಲುದಾರಿಕೆಯಲ್ಲಿ ಅನ್ನಚಕ್ರ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ.

ದೇಶಾದ್ಯಂತ ಪಡಿತರ (Ration) ಆಹಾರ ಸಾಮಗ್ರಿಗಳ ಸಾಗಾಟ ಜಾಲವನ್ನು ಸುಗಮಗೊಳಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಆರಂಭದಲ್ಲಿ 4.37 ಲಕ್ಷ ಪಡಿತರ ನ್ಯಾಯಬೆಲೆ ಅಂಗಡಿಗಳು, 6700 ಗೋದಾಮುಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ. 81 ಕೋಟಿ ಫಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ವಾರ್ಷಿಕ 250 ಕೋಟಿ ರೂಪಾಯಿ ಉಳಿತಾಯವಾಗಬಹುದೆಂದು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಿಗೆ ಅಗತ್ಯ ಸರಕುಗಳ ಸಕಾಲಿಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Leave A Reply

Your email address will not be published.