Hospital: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ: ಆರ್‌. ಅಶೋಕ್

Hospital: ಕಾಂಗ್ರೆಸ್‌ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಇಲಾಖೆ (Health Department) ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ಹಲವು ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು.

ಈಗಾಗಲೇ 28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದಿದ್ದಾರೆ.

ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂಬರ್‌ 1 ಎನ್ನುವ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವಿನಲ್ಲೂ ನಂಬರ್‌ 1 ಎಂದು ಹೇಳಲಿ ಎಂದರು.

Leave A Reply

Your email address will not be published.