Darshan : ನಟ ದರ್ಶನ್ ಗೆ ಬಿಗ್ ರಿಲೀಫ್ – ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿ ಹೈ ಕೋರ್ಟ್ ಆದೇಶ

Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಈಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ

 

ಹೌದು, ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.

ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಸಲಾಯಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಿದರೇ, ಎಸ್ ಪಿಪಿ ಪ್ರಸನ್ನ ಕುಮಾರ್ ಸರ್ಕಾರದ ಪರವಾಗಿ ಪ್ರಬಲ ವಾದವನ್ನು ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಕೋರ್ಟ್ ಆದೇಶ ನೀಡುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ನಟ ದರ್ಶನ್ ಗೆ ಬಿಗ್ ರಿಲೀಫ್ ನೀಡಿದೆ.

ಅಂದಹಾಗೆ ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡಿತ್ತು. ಅಲ್ಲಿಯೇ ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲ ವರದಿಗಳನ್ನು ಆಧರಿಸಿ ದರ್ಶನ್​ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರ ಜಾಮೀನು ಅವಧಿ ಡಿಸೆಂಬರ್​ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಜಾಮೀನು ಅವಧಿ ವಿಸ್ತರಣೆ ಆಗಿದ್ದು, ದರ್ಶನ್ ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ. ಡಿಸೆಂಬರ್​ 11ಕ್ಕೆ ದರ್ಶನ್ ಅವರ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Leave A Reply

Your email address will not be published.