Manipala : ರಸ್ತೆ ಬದಿಯಲ್ಲಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು!!

Manipala: ಕೆಟ್ಟು ನಿಂತಿದ್ದ ನೀರು ಸಾಗಾಟ ಟ್ಯಾಂಕರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಡಿ. 8ರಂದು ಮಣಿಪಾಲ(Manipala )ದಲ್ಲಿ ನಡೆದಿದೆ.
ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಸೆಯಲ್ಪಟ್ಟು ಟ್ಯಾಂಕರ್‌ನ ಹಿಂಭಾಗಕ್ಕೆ ಸವಾರನ ತಲೆ ಬಡಿದಿದೆ.
ಗಂಭೀರ ಗಾಯಗೊಂಡ ಅವರನ್ನು ತತ್‌ಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಬದುಕುಳಿಯಲಿಲ್ಲ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.