Belagavi: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿ-ಆದಿತ್ಯ ಠಾಕ್ರೆ

Belagavi: ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ದಟತನದ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ವಿವಾದವನ್ನು ಕೆದಕಿದ್ದು, ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ. ಗಡಿ ವಿಚಾರವನ್ನು ಕೆದಕುವ ಕೆಲಸ ಮಾಡುವುದು ಉದ್ದವ್ ಠಾಕ್ರೆ ನೇತೃತ್ವದ ಬಣ ಮಾಡುತ್ತಲೇ ಇದೆ.

Leave A Reply

Your email address will not be published.