Explosion: ಮನೆಯಲ್ಲೇ ಬಾಂಬ್‌ ತಯಾರಿ ವೇಳೆ ಸ್ಫೋಟ: ಮೂವರು ಸಾವು

Explosion: ಮನೆಯಲ್ಲೇ ಬಾಂಬ್‌ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್ ಎಂಬ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ರಾತ್ರಿ ವೇಳೆ ದೊಡ್ಡ ಸ್ಫೋಟದ ಶಬ್ದ ಕೇಳಿಸಿದಾಗ ಇದಕ್ಕೆ ಕಾರಣವೇನು ಎಂದು ತಿಳಿದಿರಲಿಲ್ಲ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸ್ಫೋಟದಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್‌ ತಯಾರಿಕೆ ವೇಳೆ ಏನೋ ಸಮಸ್ಯೆಯಾಗಿ ಸ್ಫೋಟಗೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Leave A Reply

Your email address will not be published.