S Jayanna: ಎಸ್ ಎಂ ಕೃಷ್ಣ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನ ಮಾಜಿ ಶಾಸಕ ಹೃದಯಘಾತಕ್ಕೆ ಬಲಿ !!
S Jayanna: ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ರಾಜ್ಯದ ಮಾಜಿ ಕಾಂಗ್ರೆಸ್ ಶಾಸಕ ಎಸ್.ಜಯಣ್ಣ (S.Jayanna) ನಿಧನರಾಗಿದ್ದಾರೆ
ಹೌದು, ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ (S.Jayanna) ಮಂಗಳವಾರ (ಡಿ.10) 12 ಗಂಟೆ ಸಮಯದಲ್ಲಿ ಹೃದಯಾಘಾತದಿಂದ ಕೊಳ್ಳೇಗಾಲದಲ್ಲಿ ನಿಧನರಾಗಿದ್ದಾರೆ.
1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಜಯಣ್ಣ ಅವರಿಗೆ ಹೃದಯಾಘಾತ ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಘಟನೆ ನಡೆದಿದ್ದು, ಜಯಣ್ಣ ಅವರಿಗೆ 72 ವರ್ಷ ವಯಸ್ಸಾಗಿತ್ತು 1994 ಹಾಗು 2013 ರಲ್ಲಿ ಶಾಸಕರಾಗಿದ್ದ ಎಸ್ ಜಯಣ್ಣ ಅವರಿಗೆ ಅನಾರೋಗ್ಯದ ಹಿನ್ನಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.