SM Krishna: ಎಸ್‌ಎಂ ಕೃಷ್ಣ ನಿಧನ; ನಾಳೆ ರಾಜ್ಯಾದ್ಯಂತ ಸರಕಾರಿ ರಜೆ

SM Krishna: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಡಿ. 10 ರಿಂದ ಡಿ.12 ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬುಧವಾರ ಸಂಜೆ ಮದ್ದೂರಿನ ಸೋಮನಹಳ್ಳಿಯಲ್ಲಿ ಎಸ್‌ಎಂ ಕೃಷ್ಣ ಅಂತ್ಯಕ್ರಿಯೆ ನಡೆಯಲಿದೆ. ಇವರಿಗೆ ಇಷ್ಟವಾದ ಜಾಗದಲ್ಲಿ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave A Reply

Your email address will not be published.