SM Krishna: ಎಸ್‌.ಎಂ ಕೃಷ್ಣ ನಿಧನ ಹಿನ್ನೆಲೆ; ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

SM Krishna: ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾಶಿವನಗರದ ಮನೆಯಲ್ಲಿ ನಿಧನ ಹೊಂದಿದ್ದಾರೆ.

 

ನಾಳೆ ಶಾಲಾ ಕಾಲೇಜುಗಳಿಗೆ ರಜೆ:
ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬುಧವಾರ ಸಂಜೆ ಮದ್ದೂರಿನ ಸೋಮನಹಳ್ಳಿಯಲ್ಲಿ ಎಸ್‌ಎಂ ಕೃಷ್ಣ ಅಂತ್ಯಕ್ರಿಯೆ ನಡೆಯಲಿದೆ. ಇವರಿಗೆ ಇಷ್ಟವಾದ ಜಾಗದಲ್ಲಿ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave A Reply

Your email address will not be published.