Murudeshwara : 4 ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋದ ಪ್ರಕರಣ – ಶಾಲಾ ಶಿಕ್ಷಕರು, ಸಿಬ್ಬಂದಿಗಳು ಅಮಾನತು ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

Share the Article

Murudeshwara : ಉತ್ತರ ಕನ್ನಡ(Uttara Kannada District) ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ(Murudeshwara) ನಿನ್ನೆ ಘೋರ ದುರಂತ ಒಂದು ಸಂಭವಿಸಿದ್ದು ಕೋಲಾರ ಜಿಲ್ಲೆಯ(Kolara District ) ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು.  ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಸಮುದ್ರಪಾಲಾದ ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

 

ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರಾಗಿರುವ ಕಾಂತರಾಜು ಅವರು ವಸತಿ ಶಾಲೆಯ ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿ ಕೆಲಸದಿಂದ ವಜಾ ಗೊಳಿಸಲಾಗಿದ್ದು, ನಿರ್ಲಕ್ಷತನ ಹಾಗೂ ಬೇಜಾಬ್ದಾರಿತನದ ಆರೋಪದ ಹಿನ್ನೆಲೆಯಲ್ಲಿ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಅಮಾನತು ಮಾಡಿ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ ಕಾಂತರಾಜು ಅವರು ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ನೌಕರರ ವಿರುದ್ಧ ಈ ಒಂದು ಕ್ರಮ ಕೈಗೊಂಡಿದ್ದಾರೆ.

 

ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

 

ಅಲ್ಲದೆ ಮಕ್ಕಳ ಪೋಷಕರು ಹಾಗೂ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಮುರುಡೇಶ್ವರ ತಲುಪಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.

 

Leave A Reply