Murudeshwara : ಸಮುದ್ರದಪಾಲಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ – ಮೃತ ದೇಹಗಳನ್ನು ಹೊರತೆಗೆದ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು

Share the Article

Murudeshwara : ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಕೋಲಾರ ಶಾಲೆಯ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.

 

ಉತ್ತರ ಕನ್ನಡ(Uttara Kannada District) ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ(Murudeshwara) ನಿನ್ನೆ ಘೋರ ದುರಂತ ಒಂದು ಸಂಭವಿಸಿದ್ದು ಕೋಲಾರ ಜಿಲ್ಲೆಯ(Kolara District ) ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು.  ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಇದೀಗ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತ ದೇಹವನ್ನು ಹೊರತೆಗೆದಿದ್ದಾರೆ.

Leave A Reply

Your email address will not be published.