Udupi : ಮೂವರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ !!

Share the Article

Udupi : ಉಡುಪಿ ಜಿಲ್ಲೆಯಲ್ಲಿ ಮಹಿಳೆ ಒಬ್ಬರು ತನ್ನ ಮೂರು ಮಕ್ಕಳು ಒಂದಿಗೆ ನಾಪತ್ತೆಯಾಗಿರುವಂತಹ ಪ್ರಕರಣ ಒಂದು ಬೆಳಕಿಗೆ ಬಂದಿದೆ

 

ಹೌದು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

 

ಕಾಣೆಯಾದವರ ಚಹರೆ: 

ಲಕ್ಷಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

 

ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave A Reply

Your email address will not be published.