Renukaswamy Case: ದರ್ಶನ್ ಹಾಗೂ ಪವಿತ್ರಾ ಗೌಡಗೆ ಜಾಮೀನು – ರೇಣುಕಾ ಸ್ವಾಮಿ ತಂದೆ ಹೇಳಿದ್ದಿಷ್ಟು

Renukaswamy Case: ಚಿತ್ರದುರ್ಗದ ರೇಣುಕಾ ಸ್ವಾಮಿ(Renukaswamy Case)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ. ಈ ಕುರಿತು ಇದೀಗ ರೇಣುಕಾ ಸ್ವಾಮಿ ತಂದೆ ಪ್ರತಿಕ್ರಿಯಿಸಿದ್ದಾರೆ.

ಹೌದು, ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಅವರು ಈ ವಿಚಾರವಾಗಿ ಸಿಎಂ ಅವರನ್ನು ಭೇಟಿ ಮಾಡುವ ಕುರಿತು ಆಪ್ತರೊಂದಿಗೆ ಚರ್ಚಿಸುತ್ತೇವೆ ಎಂದಿದ್ದಾರೆ.

ಅಲ್ಲದೆ ಸರ್ಕಾರ ಮಧ್ಯಂತರ ಬೇಲ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುವ ವಿಶ್ವಾಸವಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮೇಲೆ ಯಾವುದೇ ಒತ್ತಡ ಹಾಕಲ್ಲ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.

Leave A Reply

Your email address will not be published.