Actor Allu Arjun: ಅಲ್ಲು ಅರ್ಜುನ್ ಬಂಧನದ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶಾಕಿಂಗ್‌ ಹೇಳಿಕೆ

Actor Allu Arjun: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ನನ್ನು ಪೊಲೀಸರು ಶುಕ್ರವಾರ (ಇಂದು) ಬಂಧಿಸಿದ್ದಾರೆ. ಪುಷ್ಪ 2: ದಿ ರೈಸ್ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ನಟನ ಬಂಧನದ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಯಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ, ಕಾಲ್ತುಳಿತದಲ್ಲಿ ಸಾವು ಸಂಭವಿಸಿದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ನಟ ಅಲ್ಲು ಅರ್ಜುನ್ ಅವರನ್ನು ಬಿಗಿ ಭದ್ರತೆಯ ನಡುವೆ ಅವರ ನಿವಾಸದಿಂದ ಬಂಧಿಸಿ ಪೊಲೀಸ್ ವಾಹನದಲ್ಲಿ ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ಯಲಾಯಿತು.

ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.