Drone Prathap: ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದೇಕೆ ಗೊತ್ತಾ? ವಿಚಾರಣೆ ವೇಳೆ ಸ್ಪೋಟಕ ಸತ್ಯ ಬಾಯ್ಬಿಟ್ಟ ಡ್ರೋನ್ ಪ್ರತಾಪ್!!
Drone Prathap : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ (Big Boss) 10ನೇ ಆವೃತ್ತಿಯ ಸ್ಪರ್ಧಿ ಡ್ರೋನ್ ಪ್ರತಾಪ್ನನ್ನು (Drone Pratap) ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಒಳಪಡಿಸಿದ್ದಾರೆ. ವೇಳೆ ಅವರ ಕೆಲವು ರೋಚಕ ಸತ್ಯಗಳನ್ನು ಹೊರಗಡಹಿದ್ದಾರೆ.
ಹೌದು, ನೀರಿಗೆ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಖ್ಯಾತಿಯ ಡ್ರೋನ್ ಪ್ರತಾ ಪ್‌ನನ್ನು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ ಬಂಧಿಸಿದ್ದರು. ಸ್ಫೋಟ ನಡೆಸಿದ್ದು ಯಾಕೆ ಎಂಬ ಬಗ್ಗೆ ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಹಲವು ಸಂಗತಿಗಳನ್ನು ಬಾಯಿಬಿಟ್ಟಿದ್ದಾರೆ.
ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಹಲವು ಸಂಗತಿಯಗಳನ್ನು ಬಾಯಿಬಿಟ್ಟಿದ್ದಾರೆ. ಇದಕ್ಕೂ ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದೆ ಎಂದು ಡ್ರೋನ್ ಪ್ರತಾಪ್ ಪೊಲೀಸರ ಮುಂದೆ ಹೇಳಿದ್ದಾರೆ. ಯೂಟ್ಯೂಬ್ನಿಂದ 100 ಡಾಲರ್ ಬಂದಿತ್ತು. ಹೀಗಾಗಿ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದೆ. ಸ್ಫೋಟದ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದೆ. ಇದರಿಂದ ಬರುವ ಹಣವನ್ನು ಸಮಾಜ ಕಾರ್ಯಕ್ಕೆ ಉಪಯೋಗಿಸಲು ನಿರ್ಧರಿಸಿದ್ದೇನೆ ಎಂದು ಬಾಯಿ ಬಿಟ್ಟಿದ್ದಾರೆ.
ಅಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುತ್ತದೆ ಎಂದು ನನಗೆ ಅರಿವಿರಲಿಲ್ಲ. ಸ್ಫೋಟವಾದ ಬಳಿಕ ನನಗೆ ಅರಿವು ಆಗಿದೆ ಎಂದು ಪೊಲೀಸರ ಮುಂದೆ ಹೇಳಿದ್ದಾರೆ.