Leelavati Baipadittaya: ಯಕ್ಷಗಾನದ ಮೇರು ಕಲಾವಿದೆ, ತೆಂಕುತಿಟ್ಟಿನ ಮೊದಲ ವೃತ್ತಿಪರ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ !!
Leelavati Baipadittaya: ಕರಾವಳಿಯ, ಕನ್ನಡದ ಹೆಮ್ಮೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ(77) ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.
ಹೌದು, ತೆಂಕುತಿಟ್ಟು ಯಕ್ಷಗಾನದ ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು(Leelavati Baipadittaya) ಶನಿವಾರ(ಡಿ. 14) ಸಂಜೆ ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ.
ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹತ್ತು ವರ್ಷ ಹಾಗೂ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಭಾಗವತಿಕೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಟೀಲು, ಮೂಡುಬಿದಿರೆ ಹಾಗೂ ತಮ್ಮದೇ ಮನೆಯಲ್ಲಿ ಹಲವು ಮಂದಿಗೆ ಭಾಗವತಿಕೆ ಹೇಳಿಕೊಟ್ಟಿದ್ದಾರೆ. ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.
ಲೀಲಾವತಿ ಬೈಪಾಡಿತ್ತಾಯರ ಅವರ ಕಲಾ ತಪಸ್ಸನ್ನು ರಾಜ್ಯ ಸರಕಾರ ಗುರುತಿಸಿ 2010ನೇ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2012ರಲ್ಲಿ ಕರ್ನಾಟಕ ಸರಕಾರ ಕೊಡಮಾಡಿದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ ಸೇರಿದಂತೆ ನೂರಾರು ಸನ್ಮಾನವನ್ನು ಪಡೆದಿದ್ದಾರೆ.
ಇದೀಗ ಅವರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.
Vip Kuşadası Escort Bayanlar Güvercinada’ya akşam saatlerinde gitmenizi öneririm. https://skillifier.com/archives/23118