Dakshina Kannada: ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿ ಮುದ್ರಣ ಮಾಡಿದ ಪ್ರಕರಣ; ಕೇಸ್‌ ರದ್ದುಗೊಳಿಸಿದ ಹೈಕೋರ್ಟ್‌

Share the Article

Dakshina Kannada; ಸುಳ್ಯದ ಶಿವಪ್ರಸಾದ್‌ ಅವರು ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿಗೆ ಮತ ನೀಡಿ ಎಂದು ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುದ್ರಣ ಮಾಡಿದ್ದರು. ಈ ಪ್ರಕರಣ ರದ್ದುಕೋರಿ ಶಿವಪ್ರಸಾದ್‌ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ಪೀಠ, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಚುನಾವಣೆ ನೀತಿ ಸಂಹಿತೆಗಿಮತ ಮೊದಲೇ ಲಗ್ನ ಪತ್ರಿಕೆ ಮುದ್ರಣವಾಗಿರುವ ಕಾರಣ ಈ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿ ಆದೇಶ ಹೊರಡಿಸಿದೆ.

ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್‌ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ʼ ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್‌ ನೀಡಿದಂತೆʼ ಎಂದು ಮುದ್ರಣ ಮಾಡಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಎಪ್ರಿಲ್‌ 17 ರಂದು ವರನ ವಿರುದ್ಧ ಚುನಾವಣಾ ನೋಡಲ್‌ ಅಧಿಕಾರಿಗಳಿಗೆ ದೂರು ಬಂದಿತ್ತು.

ಅನಂತರ ನ್ಯಾಯಾಲಯಕ್ಕೆ ಚುನಾವಣಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದು, ಮದುಮಗನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

2024 ಮಾರ್ಚ್‌ 1 ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದ್ದು, ಮಾರ್ಚ್‌ 16 ರಂದು ಜಾರಿಯಾಗಿದೆ. ಈ ಕಾರಣದಿಂದ ಕೇಸು ವರನ ವಕೀಲರು ಕೇಸು ರದ್ದು ಮಾಡಲು ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿ ಹೈಕೋರ್ಟ್‌ ಏಕಸದಸ್ಯ ಪೀಠ, ಪ್ರಕರಣವನ್ನು ರದ್ದುಗೊಳಿಸಿದೆ.

Leave A Reply