Putturu : ಬಿಜೆಪಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ !! ಕಾರಣ ಹೀಗಿದೆ

Putturu : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಕರೆದು ಅಭಿನಂದಿಸಿರುವಂತಹ ವಿಶೇಷ ಪ್ರಸಂಗವನ್ನು ನಡೆದಿದೆ.

ಪುತ್ತೂರಿನ(Putturu)ಅಮರ್ ಜವಾನ್ ಜ್ಯೋತಿ ಬಳಿ ನಿನ್ನೆ (ಡಿ. 16) ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಸತ್ಯ ಮಾತನಾಡಿದ್ದಾನೆ ಎಂದು ಅಭಿನಂದನೆ ಸಲ್ಲಿಸಿದ ಬಿಜೆಪಿಗರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಕೀಮ್ ಕೂರ್ನಡ್ಕ ಎನ್ನುವ ಕಾಂಗ್ರೆಸ್ ಕಾರ್ಯಕರ್ತ, ಇತ್ತೀಚೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವಾಗಿ ಮಾತನಾಡಿ “ಶಾಸಕ ಅಶೋಕ್ ಕುಮಾರ್ ರೈ ಶಾಸಕರಾದ ಬಳಿಕ ಒಂದೇ ಒಂದು ಕೆಲಸ ಮಾಡಿಲ್ಲ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳು ಕೆಟ್ಟು ಹೋಗಿದೆ. ಹಿಂದೆ ಶಾಸಕರಾಗಿದ್ದ ಬಿಜೆಪಿಯ ಸಂಜೀವ ಮಠಂದೂರು ಮಾಡಿದ ಕೆಲಸಗಳು ಜನರಿಗೆ ಕಾಣುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಕೇವಲ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ” ಎಂದು ಹೇಳಿ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದೇ ಹೇಳಿಕೆಯನ್ನು ಬಿಜೆಪಿ ಪ್ರತಿಭಟನೆಯ ವೇಳೆ ಪ್ರಸ್ತಾಪಿಸಿದ ಬಿಜೆಪಿ ನಾಯಕರು, ಕಾಂಗ್ರೆಸ್ ಕಾರ್ಯಕರ್ತರಿಗೆ ಇದೀಗ ಸತ್ಯ ಅರ್ಥವಾಗಿದೆ. ಈ ಕಾರಣಕ್ಕೆ ಬಿಜೆಪಿ ಆತನನ್ನು ಅಭಿನಂದಿಸುತ್ತದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

Leave A Reply

Your email address will not be published.