Jog Falls: ಪ್ರವಾಸಿಗರೆ ಗಮನಿಸಿ – ಎರಡೂವರೆ ತಿಂಗಳು ಬಂದ್ ಆಗಲಿದೆ ಜಗದ್ವಿಖ್ಯಾತ ಜೋಗ ಜಲಪಾತ !! ಕಾರಣ?

Jog Falls: ವಿಶ್ವ ವಿಖ್ಯಾತ ಜೋಗ್ ಜಲಪಾತಕ್ಕೆ(Jog Falls)ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹೌದು, ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ನಿರ್ಬಂಧಿಸಲಾಗಿದೆ.

ಕಾರಣ ಏನು?
ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Leave A Reply

Your email address will not be published.