Ravichandran Ashwin Retirement: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಭಾರತದ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಣೆ!

Ravichandran Ashwin Retirement: ಗಾಬಾ ಟೆಸ್ಟ್ ಬಳಿಕ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಅವರು ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಗಬ್ಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದ ನಂತರ ಅಶ್ವಿನ್ ಈ ಘೋಷಣೆ ಮಾಡಿದ್ದಾರೆ.

ಅಶ್ವಿನ್ ಇಲ್ಲಿಯವರೆಗೆ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲೂ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಅಶ್ವಿನ್ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ನಿವೃತ್ತಿ ಘೋಷಿಸಿದರು.

Leave A Reply

Your email address will not be published.