Gujarath : ನಿರ್ಭಯ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಭಯಾನಕ ಘಟನೆ – ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗುಪ್ತಂಗಕ್ಕೆ ರಾಡ್ ಚುಚ್ಚಿದ ಪಾಪಿ !!
Gujarath : ದೆಹಲಿಯಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೆಳಿಸಿತ್ತು. ಇದು ಎಂದೆಂದಿಗೂ ಮಾನಮಾಸದಲ್ಲಿ ಮಾಸದೆ ಉಳಿಯುವಂತಹ ಪ್ರಕರಣ ಎಂದು ಕೂಡ ಸುದ್ದಿಯಾಗಿತ್ತು. ಆದರೆ ಈಗ ಅಂತದ್ದೇ ಒಂದು ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ.
ಹೌದು, ಗುಜರಾತಿನ(Gujarath ) ಭರೂಚ್ನಲ್ಲಿ 10 ವರ್ಷದ ಬಾಲಕಿಯನ್ನು ಆಕೆಯ ಮನೆಯ ಬಳಿ ಅಪಹರಿಸಿ 36 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ್ದು ಮಾತ್ರವಲ್ಲದೆ ಆಕೆಯ ಗುಪ್ತಾಂಗಕ್ಕೆ ರಾಡ್ ಅನ್ನು ಕೂಡ ತುರುಕಿ ವಿಕೃತಿ ಮೆರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾರ್ಖಂಡ್ ಮೂಲದವನಾಗಿದ್ದು ಈಗ ಆರೋಪಿಯನ್ನು ಬಂಧಿಸಲಾಗಿದೆ.
ಅಂದಹಾಗೆ ಆರೋಪಿಯು ಬಾಲಕಿಯ ಗುಡಿಸಲಿನ ಪಕ್ಕದಲ್ಲಿ ವಾಸಿಸುತ್ತಿದ್ದು, ಆಕೆಯ ತಂದೆಯಂತೆಯೇ ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ಮಾತನಾಡಿ, ವಿಜಯ್ ಪಾಸ್ವಾನ್ ಎಂಬ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಆಕೆಯ ಖಾಸಗಿ ಭಾಗಗಳಿಗೆ ಕಬ್ಬಿಣದ ರಾಡ್ ಅನ್ನು ಸೇರಿಸಿದ್ದಾನೆ, ಪ್ರಾಥಮಿಕ ತನಿಖೆಯ ಸಮಯದಲ್ಲಿ, ಆರೋಪಿ ಕಳೆದ ತಿಂಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.