C T Ravi : ಸಿ ಟಿ ರವಿ ಅರೆಸ್ಟ್ – ಸುವರ್ಣ ಸೌಧಕ್ಕೆ ಬಂದು ಎತ್ತಿಕೊಂಡು ಹೋದ ಪೊಲೀಸರು !!
C T Ravi: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪದಡಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದೆ. ವಿಚಿತ್ರ ಏನೆಂದರೆ ಸುವರ್ಣಸೌಧದಿಂದಲೇ ಅವರನ್ನು ಪೊಲೀಸರು ಎತ್ತುಕೊಂಡು ಹೋಗಿದ್ದಾರೆ.
ಹೌದು, ಸಿ.ಟಿ. ರವಿ(C T Ravi)ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು, ಮಹಿಳೆಯರ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಟೀಕೆ ಎಂಬುದು ಸೇರಿ ಬಿಎನ್‌ಎಸ್ ಕಾಯ್ದೆಯಡಿ ಹಿರೇ ಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕೇಸ್ ದಾಖಲಾದ ಬೆನ್ನಲ್ಲೇ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ. ರವಿ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.
ಅಲ್ಲದೆ ಇದಕ್ಕೂ ಮೊದಲು ಸುವರ್ಣಸೌಧದ ಒಳಗೆ ನುಗ್ಗಿದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿಟಿ ರವಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಲ್ಲಿದ್ದಂತಹ ರಕ್ಷಣ ಸಿಬ್ಬಂದಿಗಳು ಸಿಟಿ ರವಿ ಅವರನ್ನು ರಕ್ಷಿಸಿದ್ದಾರೆ.