Gruhalakshmi : ‘ಗೃಹಲಕ್ಷ್ಮಿ’ ಯೋಜನೆ ರದ್ದು ? ಬೆಳಗಾವಿ ಅಧಿವೇಶನದಲ್ಲಿ ಬಿಗ್ ಅಪ್ಡೇಟ್ ನೀಡಿದ ಸಿಎಂ ಸಿದ್ದರಾಮಯ್ಯ
Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗು ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಆದರೆ ಈಗ ಈ ಯೋಜನೆ ರದ್ದಾಗುತ್ತದೆ ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಹೌದು ಗೃಹಲಕ್ಷ್ಮಿ(Gruhalakshmi)ಯೋಜನೆ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರದ್ದು ಮಾಡಲಾಗುತ್ತದೆ ಎಂಬ ಸುದ್ದಿ ಆಗಾಗ ಮುನ್ನಡೆಗೆ ಬರುತ್ತಿರುತ್ತದೆ. ಇದಕ್ಕೆ ಸರ್ಕಾರದ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯನವರು ಆಗಾಗ ಸ್ಪಷ್ಟೀಕರಣವನ್ನು ನೀಡುತ್ತಾ ಯೋಜನೆಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅಂತೆಯೇ ಈಗಲೂ ಕೂಡ ಈ ಒಂದು ವಿಚಾರ ಮುನ್ನಲೆಗೆ ಬಂದಿದ್ದು ಇದಕ್ಕೆ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಮತ್ತೆ ಸ್ಪಷ್ಟೀಕರಣ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ‘ಗೃಹಲಕ್ಷ್ಮಿ’ಯರ ಜೊತೆ ಮಾತುಕತೆಯನ್ನು ನಡೆಸಿ, ನಂತರ ಮಾತನಾಡಿದ ಸಿಎಂ ‘ಗೃಹಲಕ್ಷ್ಮಿ’ ಹಣದಿಂದ ಹೊಸ ಬದುಕನ್ನು ಕಟ್ಟಿಕೊಂಡ ಬಗ್ಗೆ ಅವರ ಮಾತುಗಳಿಂದಲೇ ಕೇಳಿ ಸಂತೃಪ್ತನಾಗಿದ್ದೇನೆ. ಇದು ಮಹಿಳೆಯರ ಏಳಿಗೆಗಾಗಿ ಜಾರಿಯಾದ ಯೋಜನೆ. ಹೀಗಾಗಿ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತ ಮಾಡುವುದಿಲ್ಲ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸಿರುವ ಈ ಯೋಜನೆಯನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.