Delhi : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ – ದೆಹಲಿ ವಿಮಾನ ನಿಲ್ದಾಣಲ್ಲಿ ಆರೋಪಿ ಮಹಮ್ಮದ್ ಶರೀಫ್ ಬಂಧನ !!
Delhi : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು (30) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಮಹಮ್ಮದ್ ಶರೀಫ್(55) ಎಂಬಾತನನ್ನು
ಕೊನೆಗೂ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಯಾರು ಈ ಆರೋಪಿ?
ಬಂಧಿತ ಆರೋಪಿ ಬಂಟ್ವಾಳ ಕೊಡಾಜೆಯ ಮಹಮ್ಮದ್ ಶರೀಫ್(55) ಎಂಬಾತನಾಗಿದ್ದಾನೆ. ಈತನ ಮೇಲೆ ಎನ್ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಣೆ ಮಾಡಿ ಹುಡುಕಾಟ ನಡೆಸುತ್ತಿದ್ದರು. ನಿಷೇಧಿತ ಪಿಎಫ್ ಐ ಸಂಘಟನೆಯಲ್ಲಿ ಮಹಮ್ಮದ್ ಶರೀಫ್ ಸಕ್ರಿಯನಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಏನಿದು ಪ್ರಕರಣ?
2022 ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಬಳಿಯೇ ಪ್ರವೀಣ್ ಅವರನ್ನು ಕೊಲೆ ಮಾಡಲಾಗಿತ್ತು. ತಮ್ಮ ಮಾಲೀಕತ್ವದ ಅಂಗಡಿಯನ್ನು ರಾತ್ರಿ 8 ಗಂಟೆಗೆ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಘಟನೆ ರಾಜಕೀಯ ವಲಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂದಿನ ಬಿಜೆಪಿ ಸರ್ಕಾರ ಆರ್ಥಿಕ ನೆರವು ಹಾಗೂ ಪತ್ನಿಯ ಜೀವನಾಧಾರಕ್ಕೆ ಕೆಲಸ ನೀಡಿತ್ತು.